ಮುಂದಿನ ದಿನಗಳಲ್ಲಿ ಎಐಡಿಎಂಕೆ ಪಕ್ಷದಲ್ಲಿ ಶಶಿಕಲಾ ಬಹುದೊಡ್ಡ ಪಾತ್ರ ನಿರ್ವಹಿಸುವ ಸಾಧ್ಯತೆಗಳಿವೆ. ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯ ಕಾರ್ಯದರ್ಶಿ ಶೀಲಾ ಬಾಲಕೃಷ್ಣನ್ ಸಹಕಾರದೊಂದಿಗೆ ಶಶಿಕಲಾ ಅವರು ಮುಖ್ಯಮಂತ್ರಿ ಕಚೇರಿಗೆ ಸಂಬಂಧಿಸಿದ ವ್ಯವಹಾರಗಳನ್ನು ನಿರ್ವಹಿಸಿದ್ದಷ್ಟೇ ಅಲ್ಲ, ಪಕ್ಷಕ್ಕೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದರು.
ಇಷ್ಟು ವರ್ಷಗಳಲ್ಲಿ ಶಶಿಕಲಾ ಸರ್ಕಾರ ಅಥವಾ ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ನಿರ್ವಹಿಸಿಲ್ಲವಾದರೂ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದ ಅವರನ್ನು ಯಾರು ಪ್ರಶ್ನಿಸಿಲ್ಲ. ಜಯಾ ಆಪ್ತ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಕಾರ್ಯಭಾರ ವಹಿಸಿಕೊಂಡರೂ, ಪಕ್ಷದಲ್ಲಿ ಇನ್ನುಮುಂದೆ ನಡೆಯುವ ಆಟವೆಲ್ಲ ಶಶಿಕಲಾ ಅವರದೇ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.