ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅವಧಿ ಮೇ12ರ ವರೆಗೆ ವಿಸ್ತರಣೆ

ಶುಕ್ರವಾರ, 17 ಏಪ್ರಿಲ್ 2015 (15:55 IST)
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅವಧಿಯನ್ನು ಮೇ 12ರ ವರೆಗೆ ವಿಸ್ತರಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ

ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎಚ್‌.ಎಲ್.ದತ್ತು ನೇತೃತ್ವದ ನ್ಯಾಯಪೀಠ, ಜಯಲಲಿತಾಗೆ ಜಾಮೀನು ಅವಧಿ ವಿಸ್ತರಿಸಿದೆ. ಮೇ 12 ರವರೆಗೆ ಜಯಲಲಿತಾ ಅವರ ಮೇಲ್ಮನವಿ ಅರ್ಜಿಯನ್ನು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಆದೇಶ ನೀಡಿದೆ.

ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ನೆನೆಗುದಿಗೆ ಬಿದ್ದಿರುವುದರಿಂದ ಪ್ರಕರಣದ ವಿಚಾರಣೆಯನ್ನು ಮುಂದೂಡುವ ಸಂಪೂರ್ಣ ಅದಿಕಾರವನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗೆ ನೀಡಲಾಗಿದೆ.

ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರ ಪ್ರಕರಣ ಕಳೆದ 15 ವರ್ಷಗಳಿಂದ ನಡೆಯುತ್ತಿರುವುದು ನೋಡಿದಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾವ ರೀತಿಯ ದೋಷಗಳಿವೆ ಎನ್ನುವುದು ಕಂಡುಬರುತ್ತಿದೆ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್‌.ಎಲ್.ದತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ