ಕೇವಲ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಸಾಲ ಮಾತ್ರವಲ್ಲದೇ 5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವ ರೈತರ ಸಾಲವನ್ನು ಕೂಡ ಮನ್ನಾ ಮಾಡಬೇಕು ಎಂದು ಈ ಹಿಂದೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ನೋಟಿಸ್ ಜಾರಿ ಮಾಡಿದ್ದು, ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದಾರೆ.