6ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಾಲಾ ವಾಚ್‌ಮೆನ್

ಮಂಗಳವಾರ, 21 ಜೂನ್ 2016 (16:20 IST)
ಮತ್ತೊಂದು ಲೈಂಗಿಕ  ಕಿರುಕುಳ ಘಟನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಶಾಲೆಯ ಕವಲುಗಾರನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ. 
 
ಅಪ್ರಾಪ್ತ ಬಾಲಕಿ ಆರನೇ ತರಗತಿಯಲ್ಲಿ ಓದುತ್ತಿದ್ದು, ಆಕೆಯನ್ನು ಶಾಲೆಯ ಕೋಣೆಯೊಳಗೆ ಕರೆದುಕೊಂಡು ಹೋದ ಶಾಲೆಯ ಕಾವಲುಗಾರ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ತದ ನಂತರ ಬಾಲಕಿಯ ಚೀರಾಟ ಕೇಳಿದ ಶಾಲಾ ಸಿಬ್ಬಂದಿ ಕೋಣೆಯೊಳಗೆ ಧಾವಿಸಿದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ.
 
ಶಾಲಾ ಮುಖ್ಯಸ್ಥರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಸಂಗತಿ ಬಹಿರಂಗವಾಗಿದೆ. ಶಾಲೆಯ ಕಾವಲುಗಾರನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. 
 
ಬಾಲಕಿಯ ಪೋಷಕರು ಕೂಡಾ ಆರೋಪಿಯ ವಿರುದ್ಧ ಅತ್ಯಾಚಾರ ಸೇರಿದಂತೆ ಅಪಹರಣ ಪ್ರಕರಣ ದಾಖಲಿಸಿದ್ದಾರೆ. ಪರಾರಿಯಾದ ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ