ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ

ಸೋಮವಾರ, 24 ಜುಲೈ 2023 (09:39 IST)
ಲಕ್ನೋ : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ತಂಡ ಇಂದು (ಸೋಮವಾರ) ವಾರಣಾಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಈ ಸರ್ವೆ ಆರಂಭಗೊಂಡಿದೆ.

ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಸಮೀಕ್ಷೆ ಸೀಲ್ ಮಾಡಿದ ಶಿವಲಿಂಗದ ಆಕೃತಿ ಇರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಾ ಪ್ರದೇಶಗಳಲ್ಲೂ ನಡೆಯಲಿದೆ. ಮಸೀದಿಯಲ್ಲಿ ಶಿವಲಿಂಗದಂತೆ ಕಾಣುವ ರಚನೆ 2022 ರಲ್ಲಿ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿತ್ತು. ಈಗ ನಡೆಯುತ್ತಿರುವ ಸಮೀಕ್ಷೆಯ ವರದಿಯನ್ನು ಆ.4ರ ಒಳಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ