ನೀಟ್ ಪರೀಕ್ಷೆಗೆ ಎರಡನೇ ಬಲಿ : ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳವಾರ, 14 ಸೆಪ್ಟಂಬರ್ 2021 (12:06 IST)
ಚೆನ್ನೈ : ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ಇದೀಗ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಅರಿಯಲುರ್ ಜಿಲ್ಲೆಯ ಸತಂಪಡಿ ಗ್ರಾಮದ 19 ವರ್ಷದ ವಿದ್ಯಾರ್ಥಿನಿ ಕೆ.ಕನ್ನಿಮೋಳಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ ಇತ್ತೀಚಿಗಷ್ಟೆ ನೀಟ್ ಪ್ರವೇಶ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಬಾಲಕಿಯ ಪೋಷಕರಿಬ್ಬರೂ ವಕೀಲರಾಗಿದ್ದಾರೆ.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿದ್ದ ಹಿನ್ನೆಲೆಯಲ್ಲಿ ಕನ್ನಿಮೋಳಿ ಬೇಸರಗೊಂಡಿದ್ದಳು ಎನ್ನಲಾಗಿದೆ. ಪೋಷಕರು ಆಕೆಗೆ ಸಮಾಧಾನ ಹೇಳಿದ್ದರೂ ಆಕೆ ಬೇಸರಗೊಂಡಿದ್ದರು. ಪೋಷಕರು ಯಾವುದೋ ಕಾರ್ಯ ನಿಮಿತ್ತ ಪಕ್ಕದ ಊರಿಗೆ ಹೋಗಿದ್ದ ಸಮಯದಲ್ಲಿ ಕನ್ನಿಮೋಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇತ್ತೀಚೆಗಷ್ಟೇ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ