ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ

ಶುಕ್ರವಾರ, 11 ಆಗಸ್ಟ್ 2023 (12:16 IST)
ನವದೆಹಲಿ : ಕೆಂಪು ಕೋಟೆ, ರಾಜ್ಘಾಟ್ ಹಾಗೂ ಐಟಿಒನಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಆಗಸ್ಟ್ 15 ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಉಪ ಪೊಲೀಸ್ ಆಯುಕ್ತ, ಕೆಂಪು ಕೋಟೆ ಹಾಗೂ ರಾಜ್ಘಾಟ್ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭಗಳನ್ನು ಮಾಡಲು ಅನುಮತಿ ನೀಡಲ್ಲ ಎಂದು ಬರೆದುಕೊಂಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ