ಭದ್ರತಾ ವೈಫಲ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕಾರಣ : ಸುಪ್ರೀಂ

ಗುರುವಾರ, 25 ಆಗಸ್ಟ್ 2022 (14:38 IST)
ನವದೆಹಲಿ : ಪಂಜಾಬ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಉಂಟಾದ ಭದ್ರತಾ ವೈಫಲ್ಯಕ್ಕೆ ಫಿರೋಜ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನೇರ ಕಾರಣ.
 
ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕರ್ತವ್ಯವನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ಸಮಿತಿ ವರದಿ ಸಲ್ಲಿಸಿದೆ.

ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ರಚಿಸಿದ ವಿಶೇಷ ಸಮಿತಿಯೂ ತನ್ನ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠಕ್ಕೆ ಸಲ್ಲಿಸಿದೆ. ವರದಿಯಲ್ಲಿ ಪೊಲೀಸ್ ಭದ್ರತಾ ವೈಫಲ್ಯವನ್ನು ಕಟುವಾಗಿ ಟೀಕಿಸಿದೆ. 

ವರದಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಫಿರೋಜ್ಪುರ ಎಸ್ಎಸ್ಪಿ ತನ್ನ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಸಾಕಷ್ಟು ಬಲ ಲಭ್ಯವಿದ್ದರೂ ಅವರು ಭದ್ರತೆ ನೀಡುವಲ್ಲಿ, ಪ್ರತಿಭಟನೆ ತಡೆಯುವಲ್ಲಿ ವಿಫಲರಾಗಿದ್ದಾರೆ.

ಪ್ರಧಾನಿ ಮಾರ್ಗದ ಬಗ್ಗೆ 2 ಗಂಟೆಗಳ ಮೊದಲು ಅವರಿಗೆ ತಿಳಿಸಲಾಗಿದ್ದರೂ ಅವರು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಉಲ್ಲೇಖಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ