ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ

ಸೋಮವಾರ, 16 ಜನವರಿ 2017 (10:41 IST)
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆಸಲಾದ ಕಾರ್ಯಾಚರಣೆಯಲ್ಲಿ ಕನಿಷ್ಠ ಮೂವರು ಉಗ್ರರನ್ನು ಎನ್‌ಕೌಂಟ್ ಮಾಡುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ ಎಂದು ಸೇನೆ ಸೋಮವಾರ ತಿಳಿಸಿದೆ. 
ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್ ವ್ಯಾಪ್ತಿಯ ಅವೂರಾ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ನಡೆದ ಈ ಗುಂಡಿನ ಕಾಳಗದಲ್ಲಿ ಮೂರು AK-47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 
 
ಭಾನುವಾರ ಸಂಜೆ ನಿಲ್ಲಿಸಲಾಗಿದ್ದ ಎನ್‌ಕೌಂಟರ್‌ನ್ನು ಸೋಮವಾರ ಬೆಳಿಗ್ಗೆ ಮತ್ತೆ ಪ್ರಾರಂಭಿಸಲಾಯ್ತು ಮತ್ತು ಈ ಕಾರ್ಯಾಚರಣೆಯಲ್ಲಿ ನಮ್ಮ ಸಿಬ್ಬಂದಿ ಯಶ ಕಂಡರು, ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ 
 
ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂದು ಗುಪ್ತಚರ ಇಲಾಖೆ ನೀಡಿದ್ದ ಮಾಹಿತಿಯ ಈ ಎನ್‌ಕೌಂಟರ್‌‌ನ್ನು ನಡೆಸಲಾಯ್ತು, ಎಂದು ಸೇನಾ ಮೂಲಗಳು ಸ್ಪಷ್ಟ ಪಡಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ವೆಬ್ದುನಿಯಾವನ್ನು ಓದಿ