ಸಂಸತ್ತಲ್ಲಿ ಈವರೆಗೆ 40 ಬಾರಿ ಭದ್ರತಾ ಲೋಪ-ಅಮಿತ್ ಶಾ
ಸಂಸತ್ತಿನಲ್ಲಿ ನಡೆದ ಹೊಗೆಬಾಂಬ್ ದಾಳಿಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದಿರುವಾಗಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ಕೊಟ್ಟಿದ್ದಾರೆ.
ಈ ಹಿಂದೆ ಸುಮಾರು 40 ಬಾರಿ ಸಂಸತ್ತಿನಲ್ಲಿ ಭದ್ರತಾ ಲೋಪಗಳು ಆಗಿವೆ. ಪಿಸ್ತೂಲ್ ಅನ್ನು ಸದನಕ್ಕೆ ತಂದ, ಸದನದೊಳಗೆ ಜಿಗಿದ, ಕಾಗದಪತ್ರಗಳನ್ನು ತೂರಿದ, ಘೋಷಣೆಗಳನ್ನು ಕೂಗಿದ ಘಟನೆಗಳು ಆಗಿವೆ.ಆಗಲೂ ಸ್ಪೀಕರ್ ಅವರು ಕ್ರಮ ಕೈಗೊಂಡಿದ್ದಾರೆ ತಿರುಗೇಟು ನೀಡಿದ್ರು.