ಸಿಪಿಎಂ ನಾಯಕ ಸೀತಾರಾಮ್ ಯಚೂರಿ ಪುತ್ರ ಕೊರೋನಾಗೆ ಬಲಿ

ಗುರುವಾರ, 22 ಏಪ್ರಿಲ್ 2021 (10:39 IST)
ನವದೆಹಲಿ: ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಪುತ್ರ ಆಶಿಶ್ ಕೊರೋನಾಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

 

ಗುರ್ಗಾಂವ್ ನ ಮೇದಾಂತಾ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಆಶಿಶ್ ಯಚೂರಿ, ಸೀತಾರಾಮ್ ಯಚೂರಿ ಅವರ ಹಿರಿಯ ಪುತ್ರ. ಈ ಬಗ್ಗೆ ಸ್ವತಃ ಸೀತಾರಾಮ್ ಯಚೂರಿ ಟ್ವೀಟ್ ಮಾಡಿದ್ದಾರೆ.

‘ನನ್ನ ಪುತ್ರ ಆಶಿಶ್ ಕೊವಿಡ್ ನಿಂದ ಮೃತಪಟ್ಟಿದ್ದಾನೆಂದು ತಿಳಿಸಲು ದುಃಖವಾಗುತ್ತಿದೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ ಗಳು ಹಾಗೂ ಈ ಹೋರಾಟದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು’ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ