ಮೌಲ್ಯಾಧಾರಿತ ಶೇರುಗಳ ಖರೀದಿಯಿಂದ ಸೂಚ್ಯಂಕ ಚೇತರಿಕೆ

ಗುರುವಾರ, 4 ಫೆಬ್ರವರಿ 2016 (16:02 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 226 ಪಾಯಿಂಟ್‌ಗಳ ಏರಿಕೆ ಕಂಡಿದೆ. ರಾಷ್ಟ್ರೀಯ ಮಾರುಕಟ್ಟೆ ಸೂಚ್ಯಂಕ ನಿಫ್ಟಿ ಕೂಡಾ 7400 ಗಡಿ ದಾಟಿದೆ. 
 
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 647.37 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 226.70 ಪಾಯಿಂಟ್‌ಗಳ ಕುಸಿತ ಕಂಡು 24,449.42 ಅಂಕಗಳಿಗೆ ತಲುಪಿದೆ.
 
ಮೂಲಸೌಕರ್ಯ, ವಿದ್ಯುತ್ ಮತ್ತು ತೈಲ ಹಾಗೂ ಅನಿಲ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 55.90 ಪಾಯಿಂಟ್‌ಗಳ ಏರಿಕೆಯಾಗಿ 7428.90 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.54 ರಷ್ಟು ಏರಿಕೆಯಾಗಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.1.39 ರಷ್ಟು ಚೇತರಿಕೆ ಕಂಡಿದೆ. ಆದರೆ, ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.71 ರಷ್ಟು ಕುಸಿತ ಕಂಡಿದೆ.

ವೆಬ್ದುನಿಯಾವನ್ನು ಓದಿ