ಸೆನ್ಸೆಕ್ಸ್: 100 ಪಾಯಿಂಟ್‌ಗಳ ಏರಿಕೆ ಕಂಡ ಶೇರು ಸೂಚ್ಯಂಕ

ಶುಕ್ರವಾರ, 3 ಜುಲೈ 2015 (14:23 IST)
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 100 ಪಾಯಿಂಟ್‌ಗಳ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಗೃಹೋಪಕರಣ ವಸ್ತುಗಳು, ಹೆಲ್ತ್‌ಕೇರ್, ವಿದ್ಯುತ್, ಬಂಡವಾಳ ವಸ್ತುಗಳು ಮತ್ತು ವಾಹನೋದ್ಯಮ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ನಿನ್ನೆಯ ತೊಳಲಾಟದ ವಹಿವಾಟಿನ ಅಂತ್ಯಕ್ಕೆ 75.07 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 100 ಪಾಯಿಂಟ್‌ಗಳ ಏರಿಕೆ ಕಂಡು 28,046.75 ಅಂಕಗಳಿಗೆ ತಲುಪಿದೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ  ಆರಂಭಿಕ ವಹಿವಾಟಿನಲ್ಲಿ 23.50 ಪಾಯಿಂಟ್‌ಗಳ ಏರಿಕೆ ಕಂಡು 8,468.40 ಅಂಕಗಳಿಗೆ ತಲುಪಿದೆ.
 
ಗ್ರೀಸ್ ದೇಶದ ಆರ್ಥಿಕ ಬಿಕ್ಕಟ್ಟು ದೇಶದ ನಿಗದಿತ ಪ್ರಮಾಣದಲ್ಲಿ ಪ್ರಭಾವ ಬೀರುತ್ತದೆ ಎಂದು ಆರ್‌ಬಿಐ ಗವರ್ನರ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.0.44 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇ.0.27 ರಷ್ಟು ಏರಿಕೆಯಾಗಿದೆ.
 

ವೆಬ್ದುನಿಯಾವನ್ನು ಓದಿ