ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಬುಧವಾರ, 24 ಸೆಪ್ಟಂಬರ್ 2014 (12:06 IST)
ಮಾಸಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರು ಕೆಲ ಆಯ್ದ ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 50 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 431.05 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 50.79 ಪಾಯಿಂಟ್‌ಗಳ ಏರಿಕೆ ಕಂಡು 26,826.48 ಅಂಕಗಳಿಗೆ ತಲುಪಿದೆ.
 
ಗೃಹೋಪಕರಣ ವಸ್ತುಗಳು, ವಿದ್ಯುತ್, ಹೆಲ್ತ್‌ಕೇರ್, ರಿಯಲ್ಟಿ, ತೈಲ ಮತ್ತು ಅನಿಲ ಹಾಗೂ ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಚೇತರಿಕೆಯಾಗಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 17.00 ಪಾಯಿಂಟ್‌ಗಳ ಏರಿಕೆ ಕಂಡು 8034.55 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.30 ರಷ್ಟು ಕುಸಿತ ಕಂಡಿದೆ. ಆದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಷೇ.0.38 ರಷ್ಟು ಏರಿಕೆ ಕಂಡಿದೆ. 
 
 

ವೆಬ್ದುನಿಯಾವನ್ನು ಓದಿ