ಸೆನ್ಸೆಕ್ಸ್: 154 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಶುಕ್ರವಾರ, 29 ಜನವರಿ 2016 (15:51 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 154 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 22.82 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 153.99 ಪಾಯಿಂಟ್‌ಗಳ ಏರಿಕೆ ಕಂಡು 24,623.56 ಅಂಕಗಳಿಗೆ ತಲುಪಿದೆ.
 
ಗೃಹೋಪಕರಣ ವಸ್ತುಗಳು, ಉಕ್ಕು ಮತ್ತು ತೈಲ ಹಾಗೂ ಅನಿಲ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಲಾಭದತ್ತ ಸಾಗಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 54.35 ಪಾಯಿಂಟ್‌ಗಳ ಏರಿಕೆ ಕಂಡು 7,479 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.3.21 ರಷ್ಟು ಏರಿಕೆ ಕಂಡಿದ್ದರೆ, ಶಾಂಘೈ ಶೇರುಪೇಟೆ ಶೇ.2.0 ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.2.05 ರಷ್ಟು ಚೇತರಿಕೆ ಕಂಡಿದೆ.

ವೆಬ್ದುನಿಯಾವನ್ನು ಓದಿ