ಸೆನ್ಸೆಕ್ಸ್ : ಹೊಸ ವರ್ಷದಲ್ಲಿ ಮೊದಲ ಬಾರಿಗೆ ಚೇತರಿಕೆ ಕಂಡ ಶೇರುಸೂಚ್ಯಂಕ

ಶುಕ್ರವಾರ, 29 ಜನವರಿ 2016 (19:21 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನ ಪ್ರಬಾವ ದೇಶಿಯ ಶೇರುಪೇಟೆಯ ಮೇಲೆ ಬೀರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 401 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 22.82 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 401.12 ಪಾಯಿಂಟ್‌ಗಳ ಏರಿಕೆ ಕಂಡು 24,870.69 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 138.90 ಪಾಯಿಂಟ್‌ಗಳ ಏರಿಕೆ ಕಂಡು 7,563.55 ಅಂಕಗಳಿಗೆ ತಲುಪಿದೆ.
 
ಕೋಲ್ ಇಂಡಿಯಾ, ಹೀರೋ ಮೋಟಾರ್ ಕಾರ್ಪೋರೇಶನ್, ಸನ್‌ಫಾರ್ಮಾ, ಹಿಂದೂಸ್ತಾನ್ ಯುನಿಲಿವರ್, ಡಾ.ರೆಡ್ಡಿ ಮತ್ತು ಬಜಾಜ್ ಅಟೋ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಎಸ್‌ಬಿಐ, ಟಾಟಾ ಸ್ಟೀಲ್, ಎನ್‌ಟಿಪಿಸಿ, ಐಸಿಐಸಿಐ ಬ್ಯಾಂಕ್ ಮತ್ತು ಭಾರ್ತಿ ಏರ್‌ಟೆಲ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ವೆಬ್ದುನಿಯಾವನ್ನು ಓದಿ