ಸೆನ್ಸೆಕ್ಸ್: 133 ಪಾಯಿಂಟ್‌ಗಳ ಕುಸಿತ ಕಂಡ ಸಂವೇದಿ ಸೂಚ್ಯಂಕ

ಗುರುವಾರ, 19 ಮೇ 2016 (13:07 IST)
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 133 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 69 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 132.64 ಪಾಯಿಂಟ್‌ಗಳ ಇಳಿಕೆ ಕಂಡು 25,571.97 ಅಂಕಗಳಿಗೆ ತಲುಪಿದೆ.
 
ತಂತ್ರಜ್ಞಾನ, ಎಫ್‌ಎಂಸಿಜಿ, ಬ್ಯಾಂಕಿಂಗ್, ಐಟಿ, ಪಿಎಸ್‌ಯು, ಉಕ್ಕು ಮತ್ತು ತೈಲ ಹಾಗೂ ಅನಿಲ ಕ್ಷೇತ್ರಗಳ ಶೇರುಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ವಹಿವಾಟಿನಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 40.60 ಪಾಯಿಂಟ್‌ಗಳ ಕುಸಿತ ಕಂಡು 7,829.55 ಅಂಕಗಳಿಗೆ ತಲುಪಿದೆ. 
 
ಜಪಾನ್‌ನ ನಿಕೈ ಶೇರುಪೇಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ,0.05 ರಷ್ಟು ಕುಸಿತ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಕೂಡಾ ವಹಿವಾಟಿನಲ್ಲಿ ಇಳಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.02 ರಷ್ಟು ಕುಸಿವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ