ಗಣರಾಜ್ಯೋತ್ಸವ: ಆಸ್ಸಾಂ ರಾಜ್ಯದಲ್ಲಿ ಸರಣಿ ಬಾಂಬ್ ಸ್ಫೋಟ

ಗುರುವಾರ, 26 ಜನವರಿ 2017 (12:06 IST)
ನವದೆಹಲಿಯಲ್ಲಿ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸುತ್ತಿರುವ ಸಂದರ್ಭದಲ್ಲಿಯೇ ಆಸ್ಸಾಂ ರಾಜ್ಯದ ಮೂರು ಜಿಲ್ಲೆಗಳಲ್ಲಿ ಉಲ್ಫಾ ಉಗ್ರರು ಸರಣಿ ಬಾಂಬ್‌ಗಳನ್ನು ಸ್ಫೋಟಿಸಿ ಹೇಯ ಕೃತ್ಯ ಮೆರೆದಿದ್ದಾರೆ. 
 
ಆಸ್ಸಾಂ ರಾಜ್ಯದ ದಿಬುರ್‌ಗಢ್, ತೀನ್‌ಸುಖಿಯಾ ಮತ್ತು ಚಾರೈದಿಯೋ ಜಿಲ್ಲೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದರೂ ಘಟನೆಗಳಲ್ಲಿ ಯಾವುದೇ ಸಾವು ನೋವು ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಉಗ್ರರು ತಮ್ಮ ಇರುವಿಕೆಯನ್ನು ಸಾಬೀತುಪಡಿಸಲು ನಿರ್ಜನ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಆಸ್ಸಾಂ ರಾಜ್ಯದಲ್ಲಿ ಗಣರಾಜ್ಯೋತ್ಸವವನ್ನು ಬಹಿಷ್ಕರಿಸುವಂತೆ ಉಲಾ ಉಗ್ರರು ಕರೆ ನೀಡಿದ್ದರು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರಿಂದ ಹತಾಶರಾಗಿ ಸರಣಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ