ರಾಹುಲ್ಗೆ ಹಿನ್ನಡೆ : ಜೈಲು ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾ

ಶುಕ್ರವಾರ, 21 ಏಪ್ರಿಲ್ 2023 (07:38 IST)
ಅಹಮದಾಬಾದ್ : ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದ್ದು ಗುಜರಾತ್ನ ಸೂರತ್ ಸೆಷನ್ಸ್ ಕೋರ್ಟ್ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.
 
ಮೋದಿ ಉಪನಾಮಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್. ಪಿ. ಮೊಗೇರ ಅವರು ಇಂದು ರಾಹುಲ್ ಅರ್ಜಿಯನ್ನು ವಜಾಗೊಳಿಸಿ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ