ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ !

ಮಂಗಳವಾರ, 7 ಫೆಬ್ರವರಿ 2023 (09:57 IST)
ತಿರುವನಂತರಪುರಂ : ಕೇರಳ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಜೈಲು ಶಿಕ್ಷೆಗೆ ಗುರಿಯಾಗಿರುವ ಪ್ರಸಂಗ ನಡೆದಿದೆ.

ಏಳು ವರ್ಷಗಳ ಹಿಂದೆ ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು, ರಾಜ್ಯದಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಗೆ ದೋಷಿ ಎಂದು ತೀರ್ಪು ನೀಡಿದೆ.

ವಿಶೇಷ ನ್ಯಾಯಾಧೀಶ ಆಜ್ ಸುದರ್ಶನ್ ಅವರು, 16 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಚಿರಾಯಿಂಕೀಝು ಸಮೀಪದ ಅನಾಥಲವಟ್ಟಂ ಮೂಲದ ತೃತೀಯಲಿಂಗಿ ಸಚ್ಚು ಸ್ಯಾಮ್ಸನ್ ಅಲಿಯಾಸ್ ಶೆಫಿನಾ (34) ಅವರಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ದಂಡ ವಿಧಿಸಿದ್ದಾರೆ.

ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿ ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ