ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ 61 ರ ವೃದ್ಧನಿಂದ ಲೈಂಗಿಕ ಕಿರುಕುಳ

ಗುರುವಾರ, 7 ಫೆಬ್ರವರಿ 2019 (05:14 IST)
ಥಾಣೆ : ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ 61 ವರ್ಷದ ವೃದ್ಧನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಯುವತಿ ಕೆಲಸದ ನಿಮಿತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ 61 ವರ್ಷದ ವೃದ್ಧ ಸುಮಾರು ನಾಲ್ಕು ತಿಂಗಳಿನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಆದರೆ ಇತ್ತೀಚೆಗೆ ಆತ ಇದೇರೀತಿ ವರ್ತಿಸಿದಾಗ ಆಕೆ ತನ್ನ ಕೈಯಲ್ಲಿದ್ದ ಟಿಫಿನ್ ಬಾಕ್ಸ್ ನಿಂದ ಆತನ ಮೇಲೆ ಹಲ್ಲೆ ಮಾಡಿದ್ದಾಳೆ.

 

ಆಗ ಆತ ಗಾಬರಿಗೊಂಡು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿ ಕೂಡ ಸ್ಥಳೀಯರ ಜೊತೆ ಪೊಲೀಸ್ ಠಾಣೆಗೆ ಹೋಗಿ ವೃದ್ಧನ ವಿರುದ್ಧ ದೂರು ದಾಖಲಿಸಿದ್ದಾಳೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ