ಪಾರ್ಕ್ ನಲ್ಲಿ ಪ್ರಿಯಕರನ ಜೊತೆಗಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ
ಭಾನುವಾರ, 4 ನವೆಂಬರ್ 2018 (12:52 IST)
ಅಸ್ಸಾಂ : ಅಸ್ಸಾಂನಲ್ಲಿ ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಂಡ ಅಪ್ರಾಪ್ತ ಬಾಲಕಿ ಹಾಗೂ ಆಕೆಯ ಪ್ರಿಯಕರನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಅಪ್ರಾಪ್ತ ಬಾಲಕಿಯೊಬ್ಬಳು ಪಾರ್ಕ್ ನಲ್ಲಿ ಪ್ರಿಯಕರನ ಜೊತೆ ಕುಳಿತುಕೊಂಡು ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಆ ವೇಳೆ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆಗೆ ಮುಂದಾದಾಗ ಭಯಭೀತನಾದ ಪ್ರಿಯಕರ ಬಾಲಕಿಯನ್ನು ಬಿಟ್ಟು ಓಡಿ ಹೋಗಿದ್ದಾನೆ.
ಆಗ ಏಕಾಂಗಿಯಾಗಿರುವ ಬಾಲಕಿಯ ಜೊತೆ ಯುವಕರ ಗುಂಪು ಅಸಭ್ಯಬಾಗಿ ವರ್ತಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿ ಎಷ್ಟೇ ಮನವಿ ಮಾಡಿಕೊಂಡರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲ ದೃಶ್ಯಗಳನ್ನು ಅಲ್ಲಿದ್ದವರು ಮೊಬೈಲಿನಲ್ಲಿ ಶೂಟ್ ಮಾಡಿದ್ದು, ಈ ವಿಡಿಯೋ ಇದೀಗ ಅಸ್ಸಾಂನಲ್ಲಿ ವೈರಲ್ ಆಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ