ನ್ಯಾ.ರಂಜನ್ ಗೊಗೋಯ್ ನಿವೃತ್ತಿ ಹೊಂದಿರುವ ಹಿನ್ನಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಶರದ್ ಅರವಿಂದ್ ಬೋಬ್ಡೆ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿರುವ ನ್ಯಾಯಮೂರ್ತಿಗಳಲ್ಲಿ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ಶರದ್ ಅರವಿಂದ್ ಬೋಬ್ಡೆ 2021ರ ಏಪ್ರಿಲ್ 23ಕ್ಕೆ ನಿವೃತ್ತಿ ಹೊಂದಲಿದ್ದಾರೆ.