ಬಿಹಾರದ ರಾಜಕಾರಣದಲ್ಲಿ ಮಧ್ಯಪ್ರವೇಶಿಸಿ ರಾಷ್ಟ್ರೀಯ ವಿರೋಧಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸುವಂತೆ ಜೆಡಿಯು ಬಂಡಾಯ ನಾಯಕ ಶರದ್ ಯಾದವ್‌ಗೆ ಜೀವ ಬೆದರಿಕೆ ಪತ್ರವೊಂದು ಬಂದಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭೆ ಸದಸ್ಯ ಶರದ್ ಯಾದವ್ ನಿವಾಸಕ್ಕೆ ಬಂದ ಪತ್ರದ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ ಎಂದು ಯಾದವ್ ಕಚೇರಿಯ ಸಿಬ್ಬಂದಿಗಳು ತಿಳಿಸಿದ್ದಾರೆ.
ಬಿಹಾರ ಸರಕಾರ ಮತ್ತು ಹಿಂದು ಹಿತಾಸಕ್ತಿಗಳಿಗೆ ವಿರುದ್ಧವಾಗಿ ಮಾತನಾಡಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ರಾಷ್ಟ್ರೀಯ ವಿರೋಧಿಗಳೊಂದಿಗೆ ಹೊಂದಾಣಿಕೆ ಮಾಡುವ ಮೂಲಕ ಶರದ್ ಯಾದವ್ ಅವರು ದೊಡ್ಡ ತಪ್ಪು ಮಾಡಿದ್ದಾರೆಂದು ಎಡಪಂಥೀಯ ವ್ಯಕ್ತಿಗಳು ಆರೋಪಿಸಿದ್ದಾರೆ.
ಮಹಾಮೈತ್ರಿಕೂಟವನ್ನು ತೊರೆದು ಸಿಎಂ ನಿತೀಶ್ ಕುಮಾರ್ ಎನ್‌ಡಿಎ ತೆಕ್ಕೆಗೆ ಜಾರಿದ ಹಿನ್ನೆಲೆಯಲ್ಲಿ ಶರದ್ ಯಾದವ್ ಪಕ್ಷದ ನಿರ್ಧಾರವನ್ನು ವಿರೋಧಿಸಿ ಬಂಡಾಯವೆದ್ದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.