ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಶಿ ತರೂರ್ ಕರೆ

ಭಾನುವಾರ, 7 ಮೇ 2023 (15:32 IST)
ಇಂಫಾಲ : ಕಳೆದ ಹಲವು ದಿನಗಳಿಂದ ಈಶಾನ್ಯ ಭಾಗದ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಲೇ ಇದ್ದು, ಇದೀಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ಕರೆ ನೀಡಿದ್ದಾರೆ.
 
ಈ ಬಗ್ಗೆ ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ತರೂರ್, ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಂತೆ ಬಲ ಚಿಂತನೆಯುಳ್ಳ ಭಾರತೀಯರು ತಮಗೆ ಭರವಸೆ ನೀಡಿದ್ದ ಉತ್ತಮ ಆಡಳಿತಕ್ಕೆ ಏನಾಯ್ತು ಎಂಬುದನ್ನು ತಮಗೆ ತಾವೇ ಕೇಳಿಕೊಳ್ಳಬೇಕು.

ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಕೇವಲ 1 ವರ್ಷದ ಬಳಿಕ ದೊಡ್ಡ ದ್ರೋಹವನ್ನು ಅನುಭವಿಸುತ್ತಿದ್ದಾರೆ. ಆಯ್ಕೆಯಾಗಿರುವುದಕ್ಕೆ ಕಾರಣವಾದ ಕೆಲಸಗಳನ್ನೇ ರಾಜ್ಯ ಸರ್ಕಾರ ಮಾಡಲು ಸಿದ್ಧವಾಗಿಲ್ಲ. ಇದೀಗ ರಾಷ್ಟ್ರಪತಿಗಳು ಆಳ್ವಿಕೆ ನಡೆಸಲು ಸಮಯ ಬಂದಿದೆ ಎಂದು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ