ಶಶಿಕಲಾ ಬಣದ ನಾಯಕರಾಗಿ ಎಡಪ್ಪಾಡಿ ಪಳನಿ ಸ್ವಾಮಿ

ಮಂಗಳವಾರ, 14 ಫೆಬ್ರವರಿ 2017 (14:08 IST)
ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ, ಲೋಕೋಪಯೋಗಿ ಖಾತೆ ಸಚಿವ ಯಡಪ್ಪಾಡಿ ಪಳನಿ ಸ್ವಾಮಿಯನ್ನು ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
 
ಶಶಿಕಲಾ ಬಣದ ನಾಯಕರಾಗಿ ಪಳನಿಸ್ವಾಮಿ ಆಯ್ಕೆಯಾಗುತ್ತಿದ್ದಂತೆ, ಅವರು ಬೆಂಬಲಿತ ಶಾಸಕರುಗಳ ಸಹಿ ಇರುವ ಹಕ್ಕು ಪತ್ರಗಳೊಂದಿಗೆ ರಾಜ್ಯಪಾಲರಿಗೆ ಪತ್ರ ಬರೆದು ಸರಕಾರ ರಚಿಸಲು ಆಹ್ವಾನ ನೀಡುವಂತೆ ಪತ್ರ ಬರೆದಿದ್ದಾರೆ. 
 
ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಕೂಡಾ ರಾಜ್ಯಪಾಲರ ಬಳಿ ತೆರಳಿ ಸರಕಾರ ರಚಿಸಲು ಆಹ್ವಾನ ನೀಡುವಂತೆ ಕೋರಲಿದ್ದಾರೆ. 
 
ಪನ್ನೀರ್ ಸೆಲ್ವಂ ಮತ್ತು ಪಳನಿಸ್ವಾಮಿ ಸರಕಾರ ರಚಿಸಲು ಮುಂದಾಗಿರುವುದರಿಂದ ತಮಿಳುನಾಡು ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ