ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಶೀ-ಬಾಕ್ಸ್ ಗೆ ದೂರು ನೀಡಿ

ಸೋಮವಾರ, 24 ಜುಲೈ 2017 (18:14 IST)
ನವದೆಹಲಿ: ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರು ಕೆಲಸದ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಆನ್ ಲೈನ್ ಮೂಲಕ ಶೀ ಬಾಕ್ಸ್ ಗೆ ದೂರು ನೀಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮೇನಕಾ ಗಾಂಧಿ ತಿಳಿಸಿದ್ದಾರೆ.
 
ಶಿ-ಬಾಕ್ಸ್ (sexual harassment electronic box) ಪೋರ್ಟಲ್ ನ್ನು ಉದ್ಘಾಟಿಸಿ ,ಮಾತನಾಡಿದ ಸಚಿವೆ, ಕೆಲಸದ ಸ್ಥಳದಲ್ಲಿ ಮಹಿಳೆಯರು ಎದುರಿಸುವ ಲೈಂಗಿಕ ಕಿರುಕುಳದ ಸ್ವರೂಪ ಮತ್ತು ಪ್ರಮಾಣವನ್ನು ಅಂದಾಜು ಮಾಡಲು ಸದ್ಯದಲ್ಲಿಯೇ ರಾಷ್ಟ್ರೀಯ ಸಮೀಕ್ಷೆಯೊಂದನ್ನು ನಡೆಸಲಾಗುವುದು ಎಂದರು.
 
ಈ ಪೋರ್ಟಲ್ ನಲ್ಲಿ ಆರಂಭದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿರುವ ಮಹಿಳೆಯರು ದೂರು ದಾಖಲಿಸಬಹುದು. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರು ಕೂಡ ಲೈಂಗಿಕ ಕಿರುಕುಳ ಕೇಸುಗಳಿಗೆ ಸಂಬಂಧಪಟ್ಟಂತೆ ದೂರು ಸಲ್ಲಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
 

ವೆಬ್ದುನಿಯಾವನ್ನು ಓದಿ