ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್ ಮೇಲಿನ ನಿಷೇಧ ವಾಪಸ್

ಶುಕ್ರವಾರ, 7 ಏಪ್ರಿಲ್ 2017 (15:41 IST)
ಏರಿಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಬಾರಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್ ಮೇಲಿನ ನಿಷೇಧವನ್ನು ವಾಪಸ್ ಪಡೆಯಲಾಗಿದೆ. 
ಕೇಂದ್ರ ವಿಮಾನಯಾನ ಖಾತೆ ಸಚಿವ ಅಶೋಕ್ ಗಜಪತಿರಾಜುಗೆ ವಿಷಾದ ವ್ಯಕ್ತಪಡಿಸಿ ಗಾಯಕ್‌ವಾಡ್ ಪತ್ರ ಬರೆದ ಹಿನ್ನೆಲೆಯಲ್ಲಿ ಅವರ ಮೇಲಿನ ನಿಷೇಧ ಹಿಂಪಡೆಯಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
 
ಮಹಾರಾಷ್ಟ್ರದ ಉಸ್ಮಾನಾಬಾದ್ ಲೋಕಸಭಾ ಕ್ಷೇತ್ರದ ಸಂಸದರಾದ ರವೀಂದ್ರ ಗಾಯಕ್‌ವಾಡ್, ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಅವರ ವಿಮಾನಪ್ರಯಾಣಕ್ಕೆ ನಿಷೇಧ ಹೇರಿದ್ದವು.
 
ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್, ಏರಿಂಡಿಯಾ ಸಿಬ್ಬಂದಿಗೆ 25 ಬಾರಿ ಚಪ್ಪಲಿಯಿಂದ ಬಾರಿಸಿರುವುದು ಲೋಕಸಭೆಯಲ್ಲಿ ಸಂಸದರ ಆಕ್ರೋಶಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ