ಶಿವಸೇನೆ ಚಿಹ್ನೆ : ಬುಧವಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ

ಮಂಗಳವಾರ, 21 ಫೆಬ್ರವರಿ 2023 (15:26 IST)
ನವದೆಹಲಿ : ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ನೀಡಿದ ಕೇಂದ್ರ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಮಾಜಿ ಸಿಎಂ ಉದ್ದವ್ ಠಾಕ್ರೆ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ತುರ್ತು ವಿಚಾರಣೆ ನಡೆಸುವಂತೆ ಠಾಕ್ರೆ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಪೀಠದ ಮುಂದೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಬುಧವಾರ ಮಧ್ಯಾಹ್ನ 3:30 ಕ್ಕೆ ಪ್ರಕರಣದ ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದೆ.

ಪಕ್ಷದ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ನೀಡಲು ಶಾಸಕಾಂಗ ಬಲವನ್ನು ಕೇಂದ್ರ ಚುನಾವಣಾ ಆಯೋಗ ಪರಿಗಣಿಸಿದೆ. ಆದರೆ ಇದು ಸಂಘಟನೆ ವಿಭಾಗದ ಪರೀಕ್ಷೆಯ ಮೂಲಕ ತೆಗೆದುಕೊಳ್ಳಬೇಕಿತ್ತು. ಆಯೋಗದ ನಿರ್ಧಾರ ಸರಿಯಾಗಿಲ್ಲ ಎಂದು ಉದ್ದವ್ ಠಾಕ್ರೆ ಅರ್ಜಿಯಲ್ಲಿ ವಾದಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ