ಮಹಾರಾಷ್ಟ್ರ ಮೈತ್ರಿ ಸರ್ಕಾರ ಕಸರತ್ತು ಅಂತ್ಯ: ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಸಹಕಾರ ಸೂತ್ರ

ಶುಕ್ರವಾರ, 15 ನವೆಂಬರ್ 2019 (09:26 IST)
ಮುಂಬೈ: ಮಹಾರಾಷ್ಟ್ರದಲ್ಲಿ ಕೊನೆಗೂ ಶಿವಸೇನೆ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಕಾಂಗ್ರೆಸ್ ಮತ್ತು ಎನ್ ಸಿಪಿ ಸಹಕಾರದೊಂದಿಗೆ ಶಿವಸೇನೆ ಸರ್ಕಾರ ರಚಿಸುವುದು ಪಕ್ಕಾ ಆಗಿದೆ.


ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ವಿಫಲವಾದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗಿತ್ತು. ಹಾಗಿದ್ದರೂ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಅವಕಾಶ ಮಂಡಿಸಿದರೆ ಮುಕ್ತ ಅವಕಾಶವಿತ್ತು.

ಹಲವು ಸುತ್ತಿನ ಮಾತುಕತೆಗಳ ಬಳಿಕ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ. ಆ ಪ್ರಕಾರ ಮುಂದಿನ ಐದೂ ವರ್ಷಗಳ ಕಾಲ ಶಿವಸೇನೆ ಪಕ್ಷದ ಶಾಸಕ ಮುಖ್ಯಮಂತ್ರಿಯಾಗಿರುತ್ತಾರೆ. ಎನ್ ಸಿಪಿ ಮತ್ತು ಕಾಂಗ್ರೆಸ್ ನ ತಲಾ ಒಬ್ಬರು ಉಪ ಮುಖ್ಯಮಂತ್ರಿಗಳಾಗಿರುತ್ತಾರೆ. ಅಂದರೆ ರಾಜ್ಯಕ್ಕೆ ಇಬ್ಬರು ಉಪ ಮುಖ್ಯಮಂತ್ರಿಗಳಿರುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ