ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೇಜ್ರಿವಾಲ್‌ಗೆ ಶಾಕ್‌: ಅಬಕಾರಿ ನೀತಿಯ ನಷ್ಟ ಬಿಚ್ಚಿಟ್ಟ ರೇಖಾ ಗುಪ್ತಾ

Sampriya

ಮಂಗಳವಾರ, 25 ಫೆಬ್ರವರಿ 2025 (14:25 IST)
Photo Courtesy X
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಳೆದ 10 ವರ್ಷ ಆಡಳಿತ ನಡೆದಿದ್ದ ಅರವಿಂದ ಕೇಜ್ರಿವಾಲ್‌ ಅವರಿಗೆ ಶಾಕ್‌ ನೀಡಿದೆ.

ಕೇಜ್ರಿವಾಲ್‌ ಮುಖ್ಯಮಂತ್ರಿಯಾಗಿದ್ದ ವೇಳೆ 2021-2022ರ ಅಬಕಾರಿ ನೀತಿಯಿಂದಾಗಿ ವಿವಿಧ ಕಾರಣಗಳಿಂದಾಗಿ ದೆಹಲಿ ಸರ್ಕಾರವು ₹2,000 ಕೋಟಿಯಷ್ಟು ಸಂಚಿತ ನಷ್ಟವನ್ನು ಅನುಭವಿಸಿದ ಲೆಕ್ಕವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದೆಹಲಿ ವಿಧಾನಸಭೆಯಲ್ಲಿ ಬಿಚ್ಚಿಟ್ಟರು.

ಮಂಗಳವಾರ ವಿಧಾನಸಭೆಯಲ್ಲಿ ಸಿಎಜಿ ವರದಿಯನ್ನು ಮಂಡಿಸಿದ ಅವರು ವರದಿಯಲ್ಲಿ ಉಲ್ಲೇಖಿಸಿರುವ ನಷ್ಟದ ವಿವರವನ್ನು ಒತ್ತಿ ಹೇಳಿದರು. ಹಿಂದಿನ ಸರ್ಕಾರದ ಕಾರ್ಯಕ್ಷಮತೆಯ ಕುರಿತಾದ 14 ವರದಿಗಳ ಪೈಕಿ ಒಂದನ್ನು ಮಂಡಿಸಲಾಗಿದ್ದು, ಅಬಕಾರಿ ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆಗಿರುವುದನ್ನೂ ಉಲ್ಲೇಖಿಸಿದೆ ಎಂದು ಹೇಳಿದರು.

ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ  ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ ಹಲವರನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿತ್ತು. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ಕೇಜ್ರಿವಾಲ್‌ ಮತ್ತು ಸಿಸೋಡಿಯಾ ಸೋತಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ