ಪ್ರಧಾನಿ ಮೋದಿಯ ಕಾಳಜಿಗೆ 'ಮೂಕವಿಸ್ಮಿತನಾದೆ': ಸದ್ಗುರು

Sampriya

ಗುರುವಾರ, 21 ಮಾರ್ಚ್ 2024 (14:59 IST)
ನವದೆಹಲಿ: ಮಾರ್ಚ್17 ರಂದು ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು  ಮಾತನಾಡಿ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಮೋದಿ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ 66 ವರ್ಷದ ಆಧ್ಯಾತ್ಮಿಕ ಗುರು ಸದ್ಗುರು ಅವರು ಪ್ರಧಾನಿಯವರ ಕಾಳಜಿಗೆ ನಾನು 'ಮೂಕ ವಿಸ್ಮಿತನಾಗಿದ್ದೇನೆ'  ಎಂದು ಹೇಳಿದರು.

ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಅವರಿಗೆ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಂಆರ್‌ಐ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವವಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆ ಮಾರ್ಚ್ 17ರಂದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಆಧ್ಯಾತ್ಮಿಕ ನಾಯಕ ಈಗ ಚೇತರಿಸಿಕೊಳ್ಳುತ್ತಿದ್ದಾರೆ.  "ಅವರು ಈಗ ವೆಂಟಿಲೇಟರ್‌ನಿಂದ ಹೊರಗಿದ್ದಾರೆ. ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಈಗ ತಮ್ಮ ಸಹಜ ಸ್ಥಿತಿಗೆ ಮರಳಿದ್ದಾರೆ ಮತ್ತು ಸ್ಥಿರವಾದ ಪ್ರಗತಿಯನ್ನು ಸಾಧಿಸುತ್ತಿದ್ದಾರೆ. ಅವರು ಬಹುಶಃ ನಾವು ಏನು ಮಾಡಬಹುದೋ ಅದಕ್ಕಿಂತ ಹೆಚ್ಚಾಗಿ ಸ್ವತಃ ಗುಣಮುಖರಾಗುತ್ತಿದ್ದಾರೆ," ಎಂದು ನರತಜ್ಞ ಡಾ. ಸೂರಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ