ಕತ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

ಮಂಗಳವಾರ, 1 ಸೆಪ್ಟಂಬರ್ 2015 (17:57 IST)
ಕತ್ತೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿರುವ ಘಟನೆ ಜಿಂಬಾಬ್ವೆ ದೇಶದಲ್ಲಿ ನಡೆದಿದೆ. 
23 ವರ್ಷ ವಯಸ್ಸಿನ ಡಿಸೆಂಟ್ ವಿ ಮುಲಿಲೋ ಎನ್ನುವ ಆರೋಪಿ ಆಗಸ್ಟ್ 27 ರಂದು ಕತ್ತೆಯ ಮೇಲೆ ಅತ್ಯಾಚಾರವೆಸಗಿದ್ದನು. ಅತ್ಯಾಚಾರವೆಸಗುವ ಸಂದರ್ಭದಲ್ಲಿ ಕತ್ತೆಯ ಮೊಣಕಾಲುಗಳು ಗಾಯಗೊಂಡಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.  
 
ಆರೋಪಿ ಮುಲಿಲೋನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಆತನ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿದರು. ಮುಂದಿನ ವಿಚಾರಣೆ ಸೆಪ್ಟೆಂಬರ್ 15 ರಂದು ನಡೆಯಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ