ಮದುವೆಯಲ್ಲಿ ಗುಂಡಿನ ದಾಳಿ!?

ಶನಿವಾರ, 30 ಏಪ್ರಿಲ್ 2022 (09:37 IST)
ನವದೆಹಲಿ : ಮದುವೆ ಸಮಾರಂಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ 54 ವರ್ಷದ ಮಹಿಳೆಯೊಬ್ಬರಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಛತ್ತರ್ಪುರ ಪ್ರದೇಶದಲ್ಲಿ ನಡೆದಿದೆ.

ಘಟನೆಯಲ್ಲಿ ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ವಸಂತ್ ಕುಂಜ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ಹೇಳಿಕೆ ಪಡೆಯಲು ಮಹಿಳೆ ಆರೋಗ್ಯ ಸ್ಥಿತಿ ಸರಿಯಾಗಿಲ್ಲದ ಕಾರಣ ಘಟನೆ ವಿಚಾರವಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಛತ್ತರ್ಪುರ ದೇವಾಲಯದ ಮಾತಂಗಿ ಭವನದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಹರಿಯಾಣದ ಬಹದ್ದೂರ್ಗಢದಿಂದ ಮದುವೆ ಸಮಾರಂಭಕ್ಕೆ ಬಂದಿದ್ದವರ ಗುಂಪಿನಲ್ಲಿ ಮಹಿಳೆ ಕೂಡ ಒಬ್ಬರಾಗಿದ್ದಾರೆ ಎಂದು ಪೊಲೀಸ್ ಉಪ ಕಮಿಷನರ್ (ದಕ್ಷಿಣ) ಬೆನಿಟಾ ಮೇರಿ ಜೈಕರ್ ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ