ಮಣಿಪುರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ !

ಬುಧವಾರ, 13 ಸೆಪ್ಟಂಬರ್ 2023 (13:44 IST)
ಇಂಫಾಲ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕಿ ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಗುಂಪುಗಳು ಮಂಗಳವಾರ ಬೆಳಗ್ಗೆ ಕುಕಿ-ಜೋ ಸಮುದಾಯಕ್ಕೆ ಸೇರಿದ ಮೂವರು ಆದಿವಾಸಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇಧಿತ ಭಯೋತ್ಪಾದಕರು ಇಂಫಾಲ ಮತ್ತು ಕಾಂಗ್ಪೋಕಿ ಜಿಲ್ಲೆಗಳ ಗಡಿಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ಗ್ರಾಮಸ್ಥರ ಮೇಲೆ ದಾಳಿ ನಡೆಸಿ ಮೂವರನ್ನು ಹತ್ಯೆಗೈದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಗ್ರಾಮವು ಬೆಟ್ಟದ ತುದಿಯಲ್ಲಿದ್ದು, ಬುಡಕಟ್ಟು ಜನರ ಪ್ರಾಬಲ್ಯವನ್ನು ಹೊಂದಿದೆ. ಮಣಿಪುರದಲ್ಲಿ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಸಮುದಾಯಗಳ ಮಧ್ಯೆ ಆಗಾಗ ಘರ್ಷಣೆ ನಡೆಯುತ್ತಿದ್ದು, ಇದುವರೆಗೆ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ