ಶುಭಾಂಶು ಶುಕ್ಲಾ ಸಾಧನೆ ಶತಕೋಟಿ ಕನಸುಗಳಿಗೆ ಸ್ಪೂರ್ತಿ: ಪ್ರಧಾನಿ ಮೋದಿ ಬಣ್ಣನೆ

Sampriya

ಮಂಗಳವಾರ, 15 ಜುಲೈ 2025 (17:29 IST)
Photo Credit X
ನವದೆಹಲಿ: ಮಂಗಳವಾರ ಮುಂಜಾನೆ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ (ಸ್ಥಳೀಯ ಕಾಲಮಾನ) ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶ್ಲಾಘಿಸಿದ್ದಾರೆ. ಶುಕ್ಲಾ ಅವರ ಸಮರ್ಪಣೆ, ಧೈರ್ಯ ಮತ್ತು ಸಾಧನೆ ಶತಕೋಟಿ ಕನಸುಗಳಿಗೆ ಸ್ಫೂರ್ತಿಯಾಗಿದೆ ಎಂದು ಬಣ್ಣಿಸಿದ್ದಾರೆ. 

ಇದೇ ಜೂನ್‌ 25ರಂದು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪಯಣ ಬೆಳೆಸಿದ್ದರು.  18 ದಿನಗಳ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪಯಣ ಬೆಳೆಸಿದ್ದರು. ಅಲ್ಲಿ ಅನೇಕ ಪ್ರಯೋಗಗಳನ್ನು ಕೈಗೊಂಡ ನಂತರ ಇಂದು ಭೂಮಿಗೆ ಮರಳಿದ್ದಾರೆ. 

ಶುಕ್ಲಾ ಅವರಿಗೆ ಸ್ವಾಗತ ಕೋರಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇದು ಭಾರತದ ಮಹಾತ್ವಾಕಾಂಕ್ಷೆಯ ಮಾನವ ಸಹಿತ ಗಗನಯಾನ ಯೋಜನೆಗೆ ಮತ್ತಷ್ಟು ಸ್ಪೂರ್ತಿ ತಂದಿದೆ ಎಂದರು. 

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡ ಮೋದಿ ಅವರು, ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವವನ್ನು ಶ್ಲಾಘಿಸಿದ್ದಾರೆ. ಭವಿಷ್ಯದ ಬಾಹ್ಯಾಕಾಶ ಕಾರ್ಯಾಚರಣೆಗಳ ಭರವಸೆಯನ್ನು ವ್ಯಕ್ತಪಡಿಸಿದ ಅವರು, ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಯಾನ ಮಿಷನ್ - ಗಗನ್‌ಯಾನ್‌ಗೆ ಮತ್ತೊಂದು ಮೈಲಿಗಲ್ಲು ಎಂದು ಕೊಂಡಾಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ