ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

Sampriya

ಬುಧವಾರ, 9 ಜುಲೈ 2025 (19:09 IST)
Photo Credit X
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ  ರಾಜನಾಥ್ ಸಿಂಗ್ ಅವರನ್ನು ಭೇಟಿಯಾಘಿ ಕೆಲಹೊತ್ತು ಮಾತುಕತೆ ನಡೆಸಿದರು. 

ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜನಾಥ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ನಾನು ರಕ್ಷಣಾ ಸಚಿವರನ್ನು ಭೇಟಿಯಾಗಿ ಮೂರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ" ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ಅಂತ್ಯದಲ್ಲಿ ನಡೆಯುವ ಮೈಸೂರು ದಸರಾ ಉತ್ಸವದಲ್ಲಿ ಪ್ರಮುಖ ಕಾರ್ಯಕ್ರಮವಾಗಿರುವ ಏರ್ ಶೋ ನಡೆಸುವ ಬಗ್ಗೆ ಚರ್ಚಿಸಿದೆ. "ನಾವು ಪ್ರತಿ ವರ್ಷ ದಸರಾ ಹಬ್ಬದ ಸಮಯದಲ್ಲಿ ಏರ್ ಶೋ ಆಯೋಜಿಸುತ್ತೇವೆ. ಈ ವರ್ಷವೂ ಅದನ್ನು ಆಯೋಜಿಸುವಂತೆ ಕೇಂದ್ರವನ್ನು ವಿನಂತಿಸಿದ್ದೇವೆ" ಎಂದು ಸಿಎಂ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ