ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಪ್ರವೇಶ

ಬುಧವಾರ, 6 ಅಕ್ಟೋಬರ್ 2021 (08:54 IST)
ದೆಹಲಿ : ಮುಖ್ಯಮಂತ್ರಿ ಆಗಿ ಐದು ವರ್ಷಗಳ ಅವಧಿಯನ್ನು ಪೂರೈಸಿದಾಗಿನಿಂದ ಸಿದ್ದರಾಮಯ್ಯ ಅವರ ಮುಂದಿನ ಗುರಿ ರಾಷ್ಟ್ರ ರಾಜಕಾರಣ ಎಂಬ ಒಂದು ಮಾತು ಹರಿದಾಡುತ್ತಿದ್ದು, ಅದು ಸಾಕಷ್ಟು ಸಲ ಮುನ್ನೆಲೆಗೂ ಬಂದಿತ್ತು.

ಪ್ರಸಕ್ತ ವಿಧಾನಸಭೆ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ ಅವರು ರಾಷ್ಟ್ರ ರಾಜಕಾರಣಕ್ಕೆ ಧುಮುಕಲಿದ್ದಾರೆ ಎಂಬ ಮಾತುಗಳು ಮತ್ತೆ ಕೇಳಿ ಬರಲಾರಂಭಿಸಿದ್ದವು.
ಹೀಗಾಗಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ವಿಚಾರವಾಗಿ ಸಿದ್ದರಾಮಯ್ಯ ಅವರೇ ಸ್ವತಃ ಪ್ರತಿಕ್ರಿಯಿಸಿದ್ದು, ಆ ಕುರಿತ ತಮ್ಮ ನಿಲುವನ್ನೂ ಸ್ಪಷ್ಟವಾಗಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು ಎನ್ನುವ ಮೂಲಕ ತಾವು ದೆಹಲಿಗೆ ತೆರಳಿರುವುದರ ಕಾರಣವನ್ನೂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸೋನಿಯಾ ಗಾಂಧಿ ಅವರು ರಾಷ್ಟ್ರ ರಾಜಕಾರಣಕ್ಕೆ ನನಗೆ ಆಹ್ವಾನ ನೀಡಿರಲಿಲ್ಲ. ನಾನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದೇನೆ ಎಂಬುದೆಲ್ಲ ಊಹಾಪೋಹವಷ್ಟೇ. ನಮ್ಮ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಈ ಹಿಂದೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ನಾನು ರಾಜ್ಯಕ್ಕೆ ಸೀಮಿತವಾಗಿರುವೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ ಎಂಬುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ