ಸಿಧುಗೆ 1 ವರ್ಷ ಜೈಲು ಶಿಕ್ಷೆ!?
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶಿಕ್ಷೆ ನೀಡಿದೆ.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ, ಕೋರ್ಟ್ ಬಳಿಕ ಈ ಪ್ರಕಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.