ಬಾಲಕಿ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ ಪಾಪಿ!

ಗುರುವಾರ, 14 ಜುಲೈ 2022 (12:16 IST)
ಗುರುಗ್ರಾಮ : 14 ವರ್ಷದ ಬಾಲಕಿ ಮೇಲೆ ನೆರೆ ಮನೆಯ ವ್ಯಕ್ತಿಯೊಬ್ಬ ಎರಡು ತಿಂಗಳ ಕಾಲ ಪದೇ-ಪದೇ ಅತ್ಯಾಚಾರವೆಸಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಆರೋಪಿಯು ನಾಲ್ಕು ದಿನಗಳ ಹಿಂದೆ ಬಾಲಕಿಯನ್ನು ಅಪಹರಿಸಿದ್ದಾನೆ. ನಂತರ ಬಾಲಕಿಯ ಕುಟುಂಬಸ್ಥರು ಆಕೆಯನ್ನು ಹುಡುಕುತ್ತಿದ್ದು, ಬುಧವಾರ ತಡರಾತ್ರಿ ದೆಹಲಿ-ಜೈಪುರ ಹೆದ್ದಾರಿಯ ಬಿಲಾಸ್ಪುರ ಚೌಕ್ ಬಳಿ ಪತ್ತೆ ಮಾಡಿದ್ದಾರೆ.

ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ತನಗಾದ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾಳೆ. ಈ ಹಿನ್ನೆಲೆ ಬಾಲಕಿ ತಂದೆ ಪೊಲೀಸರಿಗೆ ದೂರು ಕೊಟ್ಟಿದ್ದು, ಇದರ ಆಧಾರದ ಮೇರೆಗೆ ಬಿಲಾಸ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 

ಆರೋಪಿಯು ಬಿಲಾಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಳ್ಳಿಯೊಂದರಲ್ಲಿ ಬಾಲಕಿ ನೆರೆಮನೆಯಲ್ಲಿ ವಾಸಿಸುತ್ತಿದ್ದನು. ಬಾಲಕಿಯು 8ನೇ ತರಗತಿ ಓದುತ್ತಿದ್ದಳು.

ಆಕೆಗೆ ಮದುವೆ ಮಾಡಿಕೊಳ್ಳುವುದಾಗಿ ಆಮಿಷವೊಡ್ಡಿ ಎರಡು ತಿಂಗಳ ಕಾಲ ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಜುಲೈ 8 ರಂದು ಆರೋಪಿಗಳು ನನ್ನನ್ನು ಅಪಹರಿಸಿದ್ದರು. ಈ ವೇಳೆ ಅವರು ನನ್ನ ಮೇಲೆ ಅತ್ಯಾಚಾರ ಎಸಗಿದ್ದು, ನನ್ನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ