ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಪಘಾತ

ಶುಕ್ರವಾರ, 3 ಜೂನ್ 2016 (09:10 IST)
ರಾಷ್ಟ್ರ ರಾಜಧಾನಿ ನವದೆಹಲಿಯ ಹೊರವಲಯದ ಅಲಿಪುರ ಬಳಿ ಟ್ರಕ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ 6 ಜನರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ.
 
ಅಲಿಪುರ ಬಳಿಯ ಜಿಟಿ ಕರ್ನಲ್ ರಸ್ತೆಯಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. 
 
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಲಾಗಿದ್ದು, ನಜ್ಜುಗುಜ್ಜಾಗಿರುವ ಕಾರ್ ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.
 
ಅಪಘಾತದ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ