ದೇಶದಲ್ಲಿ ಶೇ.60ರಷ್ಟು ಜನ ಕೊರೊನಾ ಅಪಾಯದಲ್ಲಿದ್ದಾರೆ- ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ವರದಿ

ಸೋಮವಾರ, 20 ಜುಲೈ 2020 (10:55 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಶೇ.60ರಷ್ಟು ಜನ ಕೊರೊನಾ ಅಪಾಯದಲ್ಲಿದ್ದಾರೆ ಎಂದು ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ವರದಿ ಬಿಡುಗಡೆ ಮಾಡಿದೆ.

ಭಾರತದ 9 ರಾಜ್ಯಗಳಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಲಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಗುಜರಾತ್, ಒಡಿಶಾ, ತೆಲಂಗಾಣ, ಜಾರ್ಖಂಡ್ ರಾಜ್ಯಗಳಲ್ಲಿ ಅಪಾಯವಿದೆ ಎಂದು ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ವರದಿಯಲ್ಲಿ ತಿಳಿಸಿದೆ.

ಭಾರತದಲ್ಲಿ ಈಗಾಗಲೇ ಕೊರೊನಾ ಪ್ರಕರಣ 11 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,18,043ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 40,425 ಜನರಿಗೆ ಕೊರೊನಾ ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆ.ಯಾಗಿದ್ದು, ಭಾರತದಲ್ಲಿ ಕೊರೊನಾ ಸೋಂಕಿಗೆ ಒಟ್ಟು 27,497 ಜನ ಬಯಲಿಯಾಗಿದ್ದಾರೆ, ಈವರೆಗೆ 7,00,087 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ