ಕಾಂಗ್ರೆಸ್ 60 ವರ್ಷಗಳಲ್ಲಿ ಮಾಡದಿರುವುದನ್ನು ಮೋದಿ ಸರ್ಕಾರ 2 ವರ್ಷಗಳಲ್ಲಿ ಪೂರ್ಣಗೊಳಿಸಿದೆ: ಸ್ಮೃತಿ ಇರಾನಿ

ಗುರುವಾರ, 26 ಮೇ 2016 (18:42 IST)
ಕಾಂಗ್ರೆಸ್ ಸರಕಾರ 60 ವರ್ಷಗಳಲ್ಲಿ ಮಾಡದಿರುವ ಸಾಧನೆಯನ್ನು ಪ್ರಧಾನಿ ಮೋದಿ ಸರಕಾರ ಕೇವಲ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
 
ಅಮೋಥಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಸಲೋನ್ ಪಟ್ಟಣದ ಬಸ್ ನಿಲ್ದಾಣದಲ್ಲಿರುವ ವಿಶ್ರಾಂತಿ ಗೃಹವನ್ನು ಉದ್ಘಾಟಿಸಿ ಮಾತನಾಡಿದ ಇರಾನಿ, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ದರಾಗಿ ಎಂದು ಕರೆ ನೀಡಿದರು.
 
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ಸ್ಮೃತಿ ಇರಾನಿ, ನೆಹರು-ಗಾಂಧಿ ಕುಟುಂಬ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. 
 
ಮುಂಬರುವ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿರುವುದರಿಂದ ಪಕ್ಷದ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದರು.
 
ಅಮೇಥಿಗೆ ಭೇಟಿ ನೀಡಿರುವ ಉದ್ದೇಶ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಸ್ಪಂದಿಸಿದ ಇರಾನಿ, ನಾನು ಸ್ಮೃತಿ ಇರಾನಿಯಾಗಿ ಅಮೇಥಿಗೆ ಭೇಟಿ ನೀಡುತ್ತೇನೆ. ಅಲ್ಲಿನ ಜನತೆ ನನಗೆ ದೀದಿ ಎಂದು ಕರೆಯುವುದರಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.
 
ಭಾರತ್ ಮಾತಾ ಕೀ ಜೈ ಎಂದು ಹೇಳುವುದು ಪ್ರತಿಯೊಬ್ಬ ಭಾರತೀಯನ ಹಕ್ಕು. ಆದರೆ, ಒತ್ತಾಯಪೂರ್ವಕವಾಗಿ ಭಾರತ್ ಮಾತಾ ಕೀ ಜೈ ಹೇಳುವಂತೆ ಒತ್ತಡ ಹೇರುವುದು ಸರಿಯಲ್ಲ ಎಂದು ಕೇಂದ್ರ ಮಾನವ ಸಂಪನ್ಮೂ6ಲ ಖಾತೆ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ