ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ

ಮಂಗಳವಾರ, 12 ಸೆಪ್ಟಂಬರ್ 2017 (16:25 IST)
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಭಾಷಣ ದೇಶದಲ್ಲಿ ಯಾರು ಕೇಳುವುದಿಲ್ಲ. ಆದ್ದರಿಂದ ಅಮೆರಿಕೆಗೆ ಹೋಗಿ ಭಾಷಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೇವಡಿ ಮಾಡಿದ್ದಾರೆ.
ಪ್ರತಿಭಾವಂತಿಕೆಯಿಂದ ಬಿಜೆಪಿ ಪಕ್ಷದಲ್ಲಿ ನಾಯಕರು ಬೆಳೆದಿದ್ದಾರೆ. ಕಾಂಗ್ರೆಸ್‌ನವರಂತೆ ವಂಶಪಾರಂಪರೆಯಾಗಿ ಬೆಳೆದಿಲ್ಲ ಎಂದು ಟಾಂಗ್ ನೀಡಿದ್ದಾರೆ.
 
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೆರಿಕದಲ್ಲಿ ತಾವು ನೀಡಿದ ಭಾಷಣದಲ್ಲಿ ವಂಶಪರಂಪರೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಂಶಪರಂಪರೆಗೆ ಅವಕಾಶವಿಲ್ಲ. ಅವರೊಬ್ಬ ವಿಫಲ ವಂಶಸ್ಥ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಳೆದ 2012ರಲ್ಲಿ ಕಾಂಗ್ರೆಸ್ ನಾಯಕರು ಮದದ ಏಮಲಿನಲ್ಲಿ ತೇಲುತ್ತಿದ್ದರು. ಪಕ್ಷದ ಕಾರ್ಯಕರ್ತರು ಭೇಟಿಯಾಗಿ ಅವರೊಂದಿಗೆ ಸಂಪರ್ಕವಿಟ್ಟುಕೊಳ್ಳುವಲ್ಲಿ ವಿಫಲವಾಗಿದ್ದರು. ಆದ್ದರಿಂದ, ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಯಾಲಿಫೋರ್ನಿಯಾದ ಬರ್ಕಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಬಹಿರಂಗಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ