ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದಿಂದಾಗಿ ಸೋನಿಯಾ ಆಸ್ಪತ್ರೆಗೆ ದಾಖಲಾಗುತ್ತಿರುವುದು ಈ ವರ್ಷದಲ್ಲಿ ಇದು 3ನೇ ಬಾರಿ. ಜನವರಿಯಲ್ಲಿ ಜ್ವರ ಹಾಗೂ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಮೇ ತಿಂಗಳಲ್ಲಿ ಆಹಾರ ಸಮಸ್ಯೆಯಿಂದಾಗಿ ಮತ್ತೆ ಆಸ್ಪತ್ರೆಯಲ್ಲಿ ಕೆಲ ದಿನ ಚಿಕಿತ್ಸೆ ಪಡೆದಿದ್ದರು.