ಸೋನಿಯಾ ಗಾಂಧಿ ಆರೋಗ್ಯ ಸ್ಥಿರ

ಶುಕ್ರವಾರ, 12 ಮೇ 2017 (08:00 IST)
ನವದೆಹಲಿ: ವ್ಯತ್ಯಾಸ ಆಹಾರ ಸೇವನೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಇನ್ನೂ ಬಿಡುಗಡೆಯಾಗಿಲ್ಲ.

 
ಆದರೆ ಅವರು ಮತ್ತಷ್ಟು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಆಹಾರ ವ್ಯತ್ಯಾಸವಾಗಿ ಕಳೆದ ಭಾನುವಾರ ಸೋನಿಯಿಆ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ