ವಿದೇಶ ಪ್ರವಾಸ ಮುಗಿಸಿ ಸ್ವದೇಶಕ್ಕೆ ಮರಳಿದ ಸೋನಿಯಾ, ಪ್ರಿಯಾಂಕಾ, ರಾಹುಲ್
ಗುರುವಾರ, 2 ಜುಲೈ 2015 (19:17 IST)
ಕೆಲ ದಿನಗಳ ಮಟ್ಟಿಗೆ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸ್ವದೇಶಕ್ಕೆ ಮರಳಿದ್ದಾರೆ.
ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಂಗಳವಾರದಂದು ದೆಹಲಿಗೆ ಆಗಮಿಸಿದ್ದರೆ ರಾಹುಲ್ ಗಾಂಧಿ ಇಂದು ನವದೆಹಲಿಗೆ ವಾಪಸಾಗಿದ್ದಾರೆ.
ಕಳೆದ ಜೂನ್ 20 ರಂದು ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಣದೀಪ್ ಸುರ್ಜೆವಾಲಾ, ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಖಾಸಗಿ ಕಾರಣಗಳಿಂದ ಪ್ರಸ್ತುತ ವಿದೇಶಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದ್ದರು.
ಯಾವ ದೇಶಗಳಿಗೆ ಯಾವ ಕಾರಣಗಳಿಗಾಗಿ ತೆರಳಿದ್ದಾರೆ ಎನ್ನುವ ವಿವರಗಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ವಕ್ತಾರರು ನಿರಾಕರಿಸಿದ್ದಾರೆ.