ಸೋನಿಯಾ ಗಾಂಧಿ ತ್ಯಾಗ ಬಹಳಷ್ಟಿದೆ : ಮಲ್ಲಿಕಾರ್ಜುನ ಖರ್ಗೆ
ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು.
ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಪಕ್ಷದ ಸಿದ್ಧಾಂತ, ವಿಚಾರಧಾರೆ ಮುಂದಿಟ್ಟುಕೊಂಡು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಪಕ್ಷದ ಎಲ್ಲರೂ ಸಹಕಾರ ಕೂಡ ಬೇಕು ಎಂದು ಮನವಿ ಮಾಡಿದ್ದಾರೆ.