ನವದೆಹಲಿ: ಇಂದು ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪರಮಾಧಿಕಾರ ಹಸ್ತಾಂತರಿಸುತ್ತಿರುವ ಸೋನಿಯಾ ಗಾಂಧಿ ಇನ್ನೇನಿದ್ದರೂ ನಾನು ನಿವೃತ್ತಿಯಾಗುವ ಕಾಲ ಎಂದಿದ್ದಾರೆ.
ನಿನ್ನೆ ಅಧಿಕಾರವಾಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸೋನಿಯಾ ಗಾಂಧಿ ಇನ್ನೇನಿದ್ದರೂ ನಿವೃತ್ತಿಯಾಗುವುದೇ ನನ್ನ ಕೆಲಸ ಎಂದಿದ್ದಾರೆ. ಹಾಗಿದ್ದರೂ ರಾಜಕೀಯಕ್ಕೆ ನಿವೃತ್ತಿ ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
19 ವರ್ಷಗಳ ಸುದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವಧಿಯಲ್ಲಿ ಕಾಂಗ್ರೆಸ್ ಎರಡು ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಆದರೆ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ