ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ರಾಹುಲ್, ಸೋನಿಯಾ

ಗುರುವಾರ, 4 ಫೆಬ್ರವರಿ 2016 (15:57 IST)
ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್‌ ವಿಚಾರಣೆಯನ್ನು ರದ್ದು ಮಾಡಬೇಕೆಂಬ ಕೋರಿಕೆಯನ್ನು ತಿರಸ್ಕರಿಸಿರುವ ದಿಲ್ಲಿ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆಕೆಯ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷರಾಗಿರುವ ರಾಹುಲ್‌ ಗಾಂಧಿ ಅವರು ಇಂದು ಗುರುವಾರ ಸುಪ್ರೀಂ ಕೋರ್ಟ್‌ ಮೆಟ್ಟಲು ಹತ್ತಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಪ್ರಕಾರ ಈ ನಾಯಕರು ಸುಪ್ರೀಂ ಕೋರ್ಟಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅನುಮತಿ ಅರ್ಜಿಯನ್ನು (ಸ್ಪೆಶಲ್‌ ಲೀವ್‌ ಪಿಟಿಷನ್‌) ಸಲ್ಲಿಸಿದ್ದಾರೆ.
 
ಪ್ರಕರಣಕ್ಕೆ ಸಂಬಂದಿಸಿದಂತೆ ದಿಲ್ಲಿ ಹೈಕೋರ್ಟ್‌ ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ಪೂರ್ವಗ್ರಹ ಪೀಡಿತವಾಗಿದ್ದು ವಿಚಾರಣಾ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವುಗಳನ್ನು ದಾಖಲೆಯಿಂದ ಕಿತ್ತು ಹಾಕಬೇಕೆಂಬುದು ಸೋನಿಯಾ - ರಾಹುಲ್‌ ಅವರ ವಿನಂತಿಸಿದ್ದಾರೆಂದು ತಿಳಿದು ಬಂದಿದೆ. 
 
ಈ ಮಧ್ಯೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ದೂರುದಾರರಾಗಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿಚಾರಣೆಯನ್ನು ನಡೆಸದೆಯೇ ಸೋನಿಯಾ ಮತ್ತು ರಾಹುಲ್‌ ಗಾಂಧಿ ಅವರ ಪರವಾಗಿ ಯಾವುದೇ ಮಧ್ಯಂತರ ಆದೇಶ ನೀಡಬಾರದು ಎಂದು ಆಗ್ರಹಿಸಿತಡೆ ಅರ್ಜಿಯನ್ನು ಸಲ್ಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ